KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 111

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.

2ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.

3ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.

4ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.

5ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.

6ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ.

7ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.

8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ.

9ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.

10ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.

Sources and attribution