KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 120

ಎಲ್ಲಾ · ಕೀರ್ತನೆಗಳುಹುಡುಕಿ

1ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.

2ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ.

3ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

4ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.

5ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.

6ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.

7ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.

Sources and attribution