KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 121

ಎಲ್ಲಾ · ಕೀರ್ತನೆಗಳುಹುಡುಕಿ

1ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

2ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.

3ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.

4ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.

5ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.

6ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.

7ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.

8ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.

Sources and attribution