KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 125

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.

2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.

3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.

4ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.

5ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

Sources and attribution