KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 140

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.

2ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.

3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.

4ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.

5ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.

6ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.

7ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ.

8ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”

9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.

10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.

11ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.

12ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.

13ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.

Sources and attribution