KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 15

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?

2ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;

3ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;

4ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.

5ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.

Sources and attribution