KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 150

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

2ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.

3ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.

4ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.

5ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.

6ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!

Sources and attribution