KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 23

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.

2ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.

3ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.

4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.

5ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.

Sources and attribution