KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 24

ಎಲ್ಲಾ · ಕೀರ್ತನೆಗಳುಹುಡುಕಿ

1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.

2ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.

3ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

4ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.

5ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.

6ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.

7ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

8ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.

9ದ್ವಾರಗಳೇ, ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

10ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.

Sources and attribution