KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 3

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!

2“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.

3ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.

4ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.

5ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.

6ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.

7ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.

8ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

Sources and attribution