KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 31

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.

2ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.

3ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.

4ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.

5ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.

6ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ.

7ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.

8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.

9ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.

10ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ.

11ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.

12ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ.

13ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.

14ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.

15ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.

16ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ.

17ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ.

18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.

19ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.

20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.

21ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ.

22“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.

23ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.

24ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.

Sources and attribution