KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 75

ಎಲ್ಲಾ · ಕೀರ್ತನೆಗಳುಹುಡುಕಿ

1ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.

2“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,

3ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.

4‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.

5ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.

6ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.

7ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.

8ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

9ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.

10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.

Sources and attribution